ಪುಣೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಹಾಗೂ ಶ್ರೀ ಅಯ್ಯಪ್ಪಸ್ವಾಮಿ ಯಕ್ಷಗಾನ ಮಂಡಳಿ ಪುಣೆ ಸಂಯುಕ್ತ ಆಶ್ರಯದಲ್ಲಿ “ಯಕ್ಷಸಂಭ್ರಮ-2018 ಕ್ಕೆ ಚಾಲನೆ

0
163
ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷರಾದ ಪ್ರೊ . ಎಂ .ಎ ಹೆಗಡೆ ಯವರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು .
ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷರಾದ ಪ್ರೊ . ಎಂ .ಎ ಹೆಗಡೆ ಯವರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು .
ಪುಣೆ :ಪುಣೆ : ಕರ್ನಾಟಕ ಯಕ್ಷಗಾನ  ಅಕಾಡೆಮಿ ಬೆಂಗಳೂರು ಹಾಗೂ ಶ್ರೀ ಅಯ್ಯಪ್ಪ ಯಕ್ಷಗಾನ ಮಂಡಳಿ ಪುಣೆ ಸಂಯುಕ್ತ ಆಶ್ರಯದಲ್ಲಿ ಪುಣೆ ಕನ್ನಡ ಸಂಘದ ಡಾ . ಕಲ್ಮಾಡಿ ಶ್ಯಾಮರಾವ್ ಕನ್ನಡ ಮಾಧ್ಯಮ ಹೈಸ್ಕೂಲ್ ಸಭಾಂಗಣದಲ್ಲಿ ಡಿ ೨೩ ರಂದು “ಯಕ್ಷಸಂಭ್ರಮ -2018” ವೈವಿಧ್ಯಮಯ ಯಕ್ಷಗಾನ ಕಾರ್ಯಕ್ರಮಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷರಾದ ಪ್ರೊ . ಎಂ .ಎ  ಹೆಗಡೆ ಯವರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು . ಪ್ರೊ . ಎಂ ಎ ಹೆಗಡೆ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು  ಮುಖ್ಯ ಅತಿಥಿಗಳಾಗಿ ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷರಾದ ಸದಾನಂದ ಕೆ ಶೆಟ್ಟಿ ,ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ,ಪುಣೆ ಕನ್ನಡ ಸಂಘದ ಉಪಾಧ್ಯಕ್ಷೆ ಇಂದಿರಾ ಸಾಲ್ಯಾನ್ ,ಪುಣೆ ತುಳುಕೂಟದ ಅಧ್ಯಕ್ಷ ಮೋಹನ್ ಶೆಟ್ಟಿ ಎಣ್ಣೆಹೊಳೆ  ಉಪಸ್ಥಿತರಿದ್ದರು . ವೇದಿಕೆಯಲ್ಲಿ  ಶ್ರೀ ಅಯ್ಯಪ್ಪ ಸ್ವಾಮಿ ಯಕ್ಷಗಾನ ಮಂಡಳಿ ಪುಣೆ ಇದರ ಅಧ್ಯಕ್ಷರಾದ ಪಾಂಗಾಳ ವಿಶ್ವನಾಥ ಶೆಟ್ಟಿ ,ಸಂಘದ ಪ್ರಧಾನ ಕಾರ್ಯದರ್ಶಿ ನಾಟ್ಯಗುರು ಮದಂಗಲ್ಲು ಆನಂದ ಭಟ್ ಉಪಸ್ಥಿತರಿದ್ದರು . ಪುಣೆ ಕನ್ನಡ ಸಂಘದ ಡಾ .ಕಲ್ಮಾಡಿ ಶ್ಯಾಮರಾವ್ ಕನ್ನಡ ಮಾಧ್ಯಮ ಹೈಸ್ಕೂಲ್ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು . ಕಲಾವಿದ ಸುಕೇಶ್ ಶೆಟ್ಟಿ ಎಣ್ಣೆಹೊಳೆ ಸ್ವಾಗತಿಸಿದರು . ಕಲಾವಿದ ವಿಕೇಶ್  ರೈ ಶೇಣಿ ಕಾರ್ಯಕ್ರಮ ನಿರೂಪಿಸಿದರು . ಕಲಾವಿದೆ ನಯನಾ ಸಿ ಶೆಟ್ಟಿ ವಂದಿಸಿದರು .

ಪ್ರತ್ಯುತ್ತರ ನೀಡಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ