ಜಮ್ಮು-ಕಾಶ್ಮೀರ: ಭದ್ರತಾ ಪಡೆ ಎನ್ ಕೌಂಟರ್ ಗೆ ಉಗ್ರರು ಬಲಿ

0
38

ಜಮ್ಮು ಕಾಶ್ಮೀರ ,ಮೇ 22: (ಕಿರಣ್ ವಾರ್ತಾ-www.kiranvarta .com ) ದೇಶದಾದ್ಯಂತ ಲೋಕಸಭಾ ಚುನಾವಣೆ ನಡೆದು ಮೇ ೨೩ ರಂದು ಮತಗಣನೆ ನಡೆಯಲಿದ್ದು ಜಮ್ಮು ಕಾಶ್ಮೀರದಲ್ಲೂ  ಕಟ್ಟೆಚ್ಚರ ವಹಿಸಲಾಗಿದೆ . ಈ ಸಂದರ್ಭದಲ್ಲೇ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.ಗೋಪಾಲ್ ಪೋರಾ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭದ್ರತಾಪಡೆ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆ ಹಾಗೂ ಕೂಂಬಿಂಗ್ ನಡೆಸಿದ್ದರು. ಈ ವೇಳೆ ಭಯೋತ್ಪಾದಕರು ಭದ್ರತಾಪಡೆ ಮೇಲೆ ಗುಂಡಿನ ದಾಳಿ ನಡೆಸಿದಾಗ ಪ್ರತಿಯಾಗಿ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಹತರಾಗಿರುವುದಾಗಿ ವರದಿ ತಿಳಿಸಿದೆ.ಇಬ್ಬರೂ ಹಿಜ್ ಬುಲ್ ಮುಜಾಹಿದೀನ್ ಸಂಘಟನೆಗೆ ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕುಲ್ಗಾಮ್ ಮತ್ತು ಶೋಪಿಯಾನ್ ಪ್ರದೇಶಗಳಲ್ಲಿ ಮೊಬೈಲ್, ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿ ವಿವರಿಸಿದೆ.

ಪ್ರತ್ಯುತ್ತರ ನೀಡಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ