ವಿಶ್ವ ಯೋಗ ದಿನಾಚರಣೆ -2020;18 ಸಾವಿರ ಅಡಿ ಎತ್ತರದ ಹಿಮ ಪ್ರದೇಶದಲ್ಲಿ  ಯೋಧರ ಯೋಗ 

0
81

ನವದೆಹಲಿ ,ಜೂನ್ . 21: (ಕಿರಣ್ ವಾರ್ತಾ – www.kiranvarta.com)ಇಂದು ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ . ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ದೇಶದಾದ್ಯಂತ ಯೋಗ ದಿನಾಚರಣೆ ಆಚರಿಸಲಾಗುತ್ತಿದೆಯಲ್ಲದೆ  ದೇಶದ ಮೂಲೆ ಮೂಲೆಯಲ್ಲಿ ಯೋಗಾಭ್ಯಾಸ ಮಾಡಲಾಗುತ್ತಿದೆ. ವಿಶೇಷವೆಂದರೆ ದೇಶದ  ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ದೇಶವನ್ನು ಶತ್ರುಗಳಿಂದ ಕಾಪಾಡುತ್ತಿರುವ ನಮ್ಮ  ವೀರ ,ಧೀರ ಯೋಧರೂ ಯೋಗ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಲಡಾಖ್ ಸೇರಿದಂತೆ ಭಾರತ-ಚೀನಾ ಗಡಿಯಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್(ITBP) ಸಿಬ್ಬಂದಿ ಯೋಗ ಪ್ರದರ್ಶನ ಮಾಡಿ ಗಮನ ಸೆಳೆದಿದ್ದಾರೆ . 

   ಖರ್ದುಂಗ್ ಲಾ ಗಡಿ ಪ್ರದೇಶದಲ್ಲಿ 18,000 ಅಡಿ ಎತ್ತರದ ಪ್ರದೇಶದಲ್ಲಿ (ITBP) ಯೋಧರು ಮೈಕೊರೆಯುವ ಚಳಿಯಲ್ಲಿ ಯೋಗ ಮಾಡಿ ಗಮನ ವಿಶೇಷವಾಗಿ ಸೆಳೆದರು.ಇಂದು ಬೆಳಗ್ಗೆ 06.30ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ ಯೋಗದ ಮಹತ್ವವನ್ನು ಸಾರಿದ್ದಾರೆ.  ಜಾತಿ, ಧರ್ಮ,ಲಿಂಗ, ಬಣ್ಣ, ವರ್ಗ ಮೀರಿ ಮಾನವೀಯ ಸಂಬಂಧ ಬಲಪಡಿಸಿಕೊಂಡು ಏಕತೆ ಸಾರುವ ಶಕ್ತಿ ಯೋಗಕ್ಕಿದೆ.  ನಮ್ಮಲ್ಲಿ ಏಕತೆ, ಒಗ್ಗಟ್ಟನ್ನು ಯೋಗ ಹೆಚ್ಚಿಸಿ ಮಾನವೀಯ ಸಂಬಂಧಗಳನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟರು.ವಿವಿಧ ಯೋಗಾಸನಗಳು ,ಪ್ರಾಣಾಯಾಮ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು  ಹೆಚ್ಚಿಸಿ ಆರೋಗ್ಯವಂತರನ್ನಾಗಿಸಿ ಮಾಡುತ್ತದೆ ಎಂದು ಪ್ರಧಾನಿಯವರು ನುಡಿದರು. 

ಜಾಹೀರಾತು


(ತಾಜಾ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಸಂಪರ್ಕಿಸಿ .. www.kiranvarta.com -ಕಿರಣ್ ವಾರ್ತಾ .. ಇದು ನಿಮ್ಮದೇ ಸುದ್ದಿ ವಾಹಿನಿ …ನಿಮ್ಮ ವ್ಯಾಪಾರ ,ವಹಿವಾಟು .ಜನ್ಮದಿನ ,ಅಭಿನಂದನೆ , ಯಾವುದೇ ರೀತಿಯ ಜಾಹೀರಾತುಗಳನ್ನು ಸ್ವೀಕರಿಸಲಾಗುವುದು…   ಜಾಹೀರಾತಿಗಾಗಿ ಸಂಪರ್ಕಿಸಿ -9890916615…ಜಾಹೀರಾತು ನೀಡಿ ಪ್ರೋತ್ಸಾಹಿಸಿ )   

ಪ್ರತ್ಯುತ್ತರ ನೀಡಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ